Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 23

ಯೆಹೋ 23:5-12

Help us?
Click on verse(s) to share them!
5ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.
6ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.
7ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.
8ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.
9ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.
10ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
11ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.
12ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,

Read ಯೆಹೋ 23ಯೆಹೋ 23
Compare ಯೆಹೋ 23:5-12ಯೆಹೋ 23:5-12