Text copied!
Bibles in Kannada

ಯೆಹೋ 24:21-27 in Kannada

Help us?

ಯೆಹೋ 24:21-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು.
22 ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು
23 ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.
24 ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.
25 ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.
26 ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,
27 ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ
ಯೆಹೋ 24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019