Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 9

ಯೆಹೋ 9:14-23

Help us?
Click on verse(s) to share them!
14ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.
15ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.
16ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.
17ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.
18ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.
19ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.
20ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ
21ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.
22ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?
23ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.

Read ಯೆಹೋ 9ಯೆಹೋ 9
Compare ಯೆಹೋ 9:14-23ಯೆಹೋ 9:14-23