Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 9

ಯೆಹೋ 9:3-11

Help us?
Click on verse(s) to share them!
3ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು
4ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,
5ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.
6ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
7ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.
8ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.
9ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.
10ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.
11‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.

Read ಯೆಹೋ 9ಯೆಹೋ 9
Compare ಯೆಹೋ 9:3-11ಯೆಹೋ 9:3-11