Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 10

ಯೋಹಾ 10:28-37

Help us?
Click on verse(s) to share them!
28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
29ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು.ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.
30ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.
31ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,
32ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,
33ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.
34ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?
35ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ
36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’
37ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ

Read ಯೋಹಾ 10ಯೋಹಾ 10
Compare ಯೋಹಾ 10:28-37ಯೋಹಾ 10:28-37