Text copied!
Bibles in Kannada

ಯೋಹಾ 12:11-27 in Kannada

Help us?

ಯೋಹಾ 12:11-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
12 ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
13 ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
14 ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.
15 ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
16 ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
17 ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
18 ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
19 ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
20 ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
21 ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
23 ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
25 ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
26 ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27 ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
ಯೋಹಾ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019