Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 12

ಯೋಹಾ 12:15-40

Help us?
Click on verse(s) to share them!
15ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
16ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
17ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
18ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
19ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
20ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
21ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
23ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
25ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
26ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
28ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
29ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
30ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
32ಆದರೆನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
33ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
34ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
35ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
37ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
38ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
39ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
40“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

Read ಯೋಹಾ 12ಯೋಹಾ 12
Compare ಯೋಹಾ 12:15-40ಯೋಹಾ 12:15-40