Text copied!
Bibles in Kannada

ಯೋಹಾ 12:21-36 in Kannada

Help us?

ಯೋಹಾ 12:21-36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
23 ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
25 ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
26 ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27 ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
28 ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
29 ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
30 ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
32 ಆದರೆನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
33 ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
34 ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36 ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
ಯೋಹಾ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019