Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 12

ಯೋಹಾ 12:34-46

Help us?
Click on verse(s) to share them!
34ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
35ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
37ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
38ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
39ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
40“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
41ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
42ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
43ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
44ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
45ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.
46ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

Read ಯೋಹಾ 12ಯೋಹಾ 12
Compare ಯೋಹಾ 12:34-46ಯೋಹಾ 12:34-46