46ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.