Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 13

ಯೋಹಾ 13:11-29

Help us?
Click on verse(s) to share them!
11ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.
12ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
13ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.
14ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
15ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
16ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
17ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
18ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.
19ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.
20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
21ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನುನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.
22ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.
23ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.
24ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು.
25ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.
26ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.
27ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.
28ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.
29ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.

Read ಯೋಹಾ 13ಯೋಹಾ 13
Compare ಯೋಹಾ 13:11-29ಯೋಹಾ 13:11-29