Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 16

ಯೋಹಾ 16:13-23

Help us?
Click on verse(s) to share them!
13ಆದರೆಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.
14ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದನನ್ನನ್ನೇ ಮಹಿಮೆಪಡಿಸುವನು.
15ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.
16ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು.
17ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’ ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
18“‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.
19ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?
20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆನಿಮ್ಮ ದುಃಖವು ಹೋಗಿ ಆನಂದ ಬರುವುದು.
21ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
22ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ,ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.

Read ಯೋಹಾ 16ಯೋಹಾ 16
Compare ಯೋಹಾ 16:13-23ಯೋಹಾ 16:13-23