Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 17

ಯೋಹಾ 17:15-21

Help us?
Click on verse(s) to share them!
15ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
16ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.
17ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
18ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
19ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.
20“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.
21ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

Read ಯೋಹಾ 17ಯೋಹಾ 17
Compare ಯೋಹಾ 17:15-21ಯೋಹಾ 17:15-21