Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 17

ಯೋಹಾ 17:9-12

Help us?
Click on verse(s) to share them!
9ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
10ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
11ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
12ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.

Read ಯೋಹಾ 17ಯೋಹಾ 17
Compare ಯೋಹಾ 17:9-12ಯೋಹಾ 17:9-12