Text copied!
Bibles in Kannada

ಯೋಹಾ 17:9-12 in Kannada

Help us?

ಯೋಹಾ 17:9-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
10 ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
11 ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
12 ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
ಯೋಹಾ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019