Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 18

ಯೋಹಾ 18:27-32

Help us?
Click on verse(s) to share them!
27ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.
28ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
29ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.
30ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.
31ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
32ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.

Read ಯೋಹಾ 18ಯೋಹಾ 18
Compare ಯೋಹಾ 18:27-32ಯೋಹಾ 18:27-32