Text copied!
Bibles in Kannada

ಯೋಹಾ 18:4-13 in Kannada

Help us?

ಯೋಹಾ 18:4-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.
5 ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
6 ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
7 ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.
9 ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.
10 ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
11 ಆಗ ಯೇಸು ಪೇತ್ರನಿಗೆ, “ಕತ್ತಿಯನ್ನುಒರೆಯಲ್ಲಿ ಹಾಕು.ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.
12 ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
13 ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
ಯೋಹಾ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019