Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 19

ಯೋಹಾ 19:13-17

Help us?
Click on verse(s) to share them!
13ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.
14ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.
15ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.
17ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.

Read ಯೋಹಾ 19ಯೋಹಾ 19
Compare ಯೋಹಾ 19:13-17ಯೋಹಾ 19:13-17