Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 19

ಯೋಹಾ 19:19-23

Help us?
Click on verse(s) to share them!
19ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.
20ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.
21ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು.
22ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.
23ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

Read ಯೋಹಾ 19ಯೋಹಾ 19
Compare ಯೋಹಾ 19:19-23ಯೋಹಾ 19:19-23