Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 19

ಯೋಹಾ 19:33-41

Help us?
Click on verse(s) to share them!
33ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.
34ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
35ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
36ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
37“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
38ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.
39ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
40ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
41ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.

Read ಯೋಹಾ 19ಯೋಹಾ 19
Compare ಯೋಹಾ 19:33-41ಯೋಹಾ 19:33-41