Text copied!
Bibles in Kannada

ಯೋಹಾ 19:39-42 in Kannada

Help us?

ಯೋಹಾ 19:39-42 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
40 ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
41 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.
42 ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.
ಯೋಹಾ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019