Text copied!
Bibles in Kannada

ಯೋಹಾ 19:5-10 in Kannada

Help us?

ಯೋಹಾ 19:5-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.
6 ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.
7 ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
8 ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,
9 ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.
10 ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು.
ಯೋಹಾ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019