Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 19

ಯೋಹಾ 19:7-16

Help us?
Click on verse(s) to share them!
7ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
8ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,
9ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.
10ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು.
11ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.
12ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
13ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.
14ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.
15ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.

Read ಯೋಹಾ 19ಯೋಹಾ 19
Compare ಯೋಹಾ 19:7-16ಯೋಹಾ 19:7-16