Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 1

ಯೋಹಾ 1:12-24

Help us?
Click on verse(s) to share them!
12ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
13ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
14ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
15ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.
16ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.
17ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
18ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
19ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,
20ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.
21ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.
22ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
23ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.
24ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.

Read ಯೋಹಾ 1ಯೋಹಾ 1
Compare ಯೋಹಾ 1:12-24ಯೋಹಾ 1:12-24