7ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
8ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.
9ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
10ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.
11ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.