Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 20

ಯೋಹಾ 20:1-12

Help us?
Click on verse(s) to share them!
1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.
2ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
3ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.
4ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.
5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.
6ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ
7ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.
8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.
9ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
10ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.
11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,
12ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.

Read ಯೋಹಾ 20ಯೋಹಾ 20
Compare ಯೋಹಾ 20:1-12ಯೋಹಾ 20:1-12