Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 20

ಯೋಹಾ 20:17-31

Help us?
Click on verse(s) to share them!
17ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
18ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.
20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.
23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.
24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.
25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.
26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”
27ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.
28ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
29ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ,ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.
31ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

Read ಯೋಹಾ 20ಯೋಹಾ 20
Compare ಯೋಹಾ 20:17-31ಯೋಹಾ 20:17-31