Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 20

ಯೋಹಾ 20:2-10

Help us?
Click on verse(s) to share them!
2ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
3ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.
4ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.
5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.
6ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ
7ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.
8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.
9ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
10ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.

Read ಯೋಹಾ 20ಯೋಹಾ 20
Compare ಯೋಹಾ 20:2-10ಯೋಹಾ 20:2-10