Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 20

ಯೋಹಾ 20:5-18

Help us?
Click on verse(s) to share them!
5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.
6ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ
7ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.
8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.
9ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
10ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.
11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,
12ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.
13ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.
14ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.
15ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.
16ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.
17ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
18ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.

Read ಯೋಹಾ 20ಯೋಹಾ 20
Compare ಯೋಹಾ 20:5-18ಯೋಹಾ 20:5-18