Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 21

ಯೋಹಾ 21:10-21

Help us?
Click on verse(s) to share them!
10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
12ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.
14ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ,ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
17ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
18“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
21ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,

Read ಯೋಹಾ 21ಯೋಹಾ 21
Compare ಯೋಹಾ 21:10-21ಯೋಹಾ 21:10-21