Text copied!
Bibles in Kannada

ಯೋಹಾ 21:18-25 in Kannada

Help us?

ಯೋಹಾ 21:18-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
19 ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
20 ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
21 ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
22 ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
23 ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.
24 ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
25 ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
ಯೋಹಾ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019