Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 21

ಯೋಹಾ 21:4-11

Help us?
Click on verse(s) to share them!
4ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
5ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
6ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
7ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.

Read ಯೋಹಾ 21ಯೋಹಾ 21
Compare ಯೋಹಾ 21:4-11ಯೋಹಾ 21:4-11