Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 2

ಯೋಹಾ 2:1-6

Help us?
Click on verse(s) to share them!
1ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
2ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.
3ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
4ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
5ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
6ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.

Read ಯೋಹಾ 2ಯೋಹಾ 2
Compare ಯೋಹಾ 2:1-6ಯೋಹಾ 2:1-6