Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 2

ಯೋಹಾ 2:13-17

Help us?
Click on verse(s) to share them!
13ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
14ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
15ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
16ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
17ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.

Read ಯೋಹಾ 2ಯೋಹಾ 2
Compare ಯೋಹಾ 2:13-17ಯೋಹಾ 2:13-17