Text copied!
Bibles in Kannada

ಯೋಹಾ 2:13-17 in Kannada

Help us?

ಯೋಹಾ 2:13-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
14 ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
15 ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
16 ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
17 ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
ಯೋಹಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019