Text copied!
Bibles in Kannada

ಯೋಹಾ 2:15-23 in Kannada

Help us?

ಯೋಹಾ 2:15-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
16 ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
17 ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
18 ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
19 ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
20 ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
21 ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
22 ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
23 ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
ಯೋಹಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019