Text copied!
Bibles in Kannada

ಯೋಹಾ 2:3-8 in Kannada

Help us?

ಯೋಹಾ 2:3-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
4 ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
5 ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
6 ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
7 ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
8 ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
ಯೋಹಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019