6ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
7ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
8ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.