Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 2

ಯೋಹಾ 2:9-13

Help us?
Click on verse(s) to share them!
9ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
10“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
11ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
12ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
13ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.

Read ಯೋಹಾ 2ಯೋಹಾ 2
Compare ಯೋಹಾ 2:9-13ಯೋಹಾ 2:9-13