1ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.
2ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
3ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
4ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
5ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
6ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.
7‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
8ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.
9ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,