Text copied!
Bibles in Kannada

ಯೋಹಾ 3:17-28 in Kannada

Help us?

ಯೋಹಾ 3:17-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
18 ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
19 ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
20 ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
21 ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
22 ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.
23 ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
24 ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.
25 ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.
26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
27 ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
28 ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
ಯೋಹಾ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019