Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 3

ಯೋಹಾ 3:19-36

Help us?
Click on verse(s) to share them!
19ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
20ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
21ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
22ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.
23ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
24ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.
25ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.
26ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
27ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
28‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
29ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
30ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
31ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
32ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
33ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.
34ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
35ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.
36ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

Read ಯೋಹಾ 3ಯೋಹಾ 3
Compare ಯೋಹಾ 3:19-36ಯೋಹಾ 3:19-36