Text copied!
Bibles in Kannada

ಯೋಹಾ 3:4-14 in Kannada

Help us?

ಯೋಹಾ 3:4-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
5 ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
6 ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.
7 ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
8 ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.
9 ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,
10 ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?
11 ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
12 ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
13 ಪರಲೋಕದಿಂದ ಇಳಿದು ಬಂದವನೇ, ಅಂದರೆ,ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
14 ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
ಯೋಹಾ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019