Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 3

ಯೋಹಾ 3:9-14

Help us?
Click on verse(s) to share them!
9ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,
10ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?
11ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
12ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
13ಪರಲೋಕದಿಂದ ಇಳಿದು ಬಂದವನೇ, ಅಂದರೆ,ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
14ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.

Read ಯೋಹಾ 3ಯೋಹಾ 3
Compare ಯೋಹಾ 3:9-14ಯೋಹಾ 3:9-14