Text copied!
Bibles in Kannada

ಯೋಹಾ 3:9-14 in Kannada

Help us?

ಯೋಹಾ 3:9-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,
10 ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?
11 ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
12 ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
13 ಪರಲೋಕದಿಂದ ಇಳಿದು ಬಂದವನೇ, ಅಂದರೆ,ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
14 ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
ಯೋಹಾ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019