Text copied!
Bibles in Kannada

ಯೋಹಾ 4:12-21 in Kannada

Help us?

ಯೋಹಾ 4:12-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,
13 ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,
14 ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
15 ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,
16 ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.
17 ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.
18 ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.
19 ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.
20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.
21 ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.
ಯೋಹಾ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019