Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 4

ಯೋಹಾ 4:12-27

Help us?
Click on verse(s) to share them!
12ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,
13ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,
14ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
15ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,
16ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.
17ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.
18ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.
19ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.
20ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.
21ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.
22ಸಮಾರ್ಯದವರಾದನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.
23ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
24ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರುಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
25ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
26ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.

Read ಯೋಹಾ 4ಯೋಹಾ 4
Compare ಯೋಹಾ 4:12-27ಯೋಹಾ 4:12-27