Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 4

ಯೋಹಾ 4:25-33

Help us?
Click on verse(s) to share them!
25ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
26ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.
28ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,
29“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.
30ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.
31ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.
32ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು
33ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

Read ಯೋಹಾ 4ಯೋಹಾ 4
Compare ಯೋಹಾ 4:25-33ಯೋಹಾ 4:25-33