Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 4

ಯೋಹಾ 4:34-39

Help us?
Click on verse(s) to share them!
34ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
35‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.
36ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.
37‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.
38ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.
39“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

Read ಯೋಹಾ 4ಯೋಹಾ 4
Compare ಯೋಹಾ 4:34-39ಯೋಹಾ 4:34-39