Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 4

ಯೋಹಾ 4:36-49

Help us?
Click on verse(s) to share them!
36ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.
37‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.
38ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.
39“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
40ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.
41ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,
42ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.
43ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
44ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.
45ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
46ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
47ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
48ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.
49ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು

Read ಯೋಹಾ 4ಯೋಹಾ 4
Compare ಯೋಹಾ 4:36-49ಯೋಹಾ 4:36-49